
ಎಸ್ಬಿಐ 8904 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 3/5/2019 ಕೊನೆಯ ದಿನವಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ.
- ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಪೂರ್ಣಗೊಳಿಸಿರಬೇಕು.
- ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 28 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಏಪ್ರಿಲ್ 2019ಕ್ಕೆ ಅನ್ವಯವಾಗುವಂತೆ.
- ಅರ್ಜಿ ಶುಲ್ಕ : ಎಸ್ಸಿ/ಎಸ್ಟಿ/ಅಂಗವಿಕಲ/ಮಾಜಿ ಸೈನಿಕರಿಗೆ ಅಭ್ಯರ್ಥಿ 125 ರೂ.ಗಳು. ಸಾಮಾನ್ಯ/ಓಬಿಸಿ/ಇತರರಿಗೆ 750 ರೂ.ಗಳು.
-
ಪ್ರಮುಖ ದಿನಾಂಕಗಳು : 12/4/2019 ರಿಂದ 3/05/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದು.
